ತರೀಕೆರೆ (ಜೂ.27) : ಸೇವಾಭಾರತಿ-ಸೇವಾಧಾಮ ಇದರ ಆಶ್ರಯದಲ್ಲಿ ತರೀಕೆರೆ ರೋಟರಿ ಕ್ಲಬ್ ಮತ್ತು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಇವರ ಸಹಯೋಗದಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ವಸತಿಯುತ 20ನೇ ಉಚಿತ ಆರೋಗ್ಯ ತಪಾಸಣೆ ಹಾಗೂ ಜಾಗೃತಿ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ಜೂನ್ 27 ರಂದು ತರೀಕೆರೆಯ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಸೇವಾಭಾರತಿ ಸಂಸ್ಥೆಯ ಅಧ್ಯಕ್ಷೆ ಶ್ರೀಮತಿ ಸ್ವರ್ಣಗೌರಿ ಪ್ರಸ್ತಾವಿಕ ನುಡಿಗಳನ್ನಾಡಿದರು. ಸಂಸ್ಥೆಯ ಕಾರ್ಯ ಚಟುವಟಿಕೆಯ ಬಗ್ಗೆ ಸಂಕ್ಷಿಪ್ತವಾಗಿ ಕಾರ್ಯಕ್ರಮ ಸಂಯೋಜಕರಾದ ಶ್ರೀ ಆಶ್ರಿತ್ ಸಿ. ಪಿ. ವಿವರಿಸಿದರು. ಕಾರ್ಯಕ್ರಮವನ್ನು ತರೀಕೆರೆ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ತಾಲ್ಲೂಕು ಆರೋಗ್ಯಧಿಕಾರಿಗಳಾದ ಡಾ. ಚಂದ್ರಶೇಖರ್ ಬಿ. ಜೆ. ಉದ್ಘಾಟಿಸಿ ಸೇವಾಭಾರತಿಯು ಅತ್ಯುತ್ತಮ ಸೇವೆಯನ್ನು ಮಾಡುತ್ತಿದ್ದು ಸಂಸ್ಥೆಯ ಈ ಸೇವೆಗೆ ಕೃತಜ್ಞತೆಯನ್ನು ತಿಳಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ತರೀಕೆರೆ ರೋಟರಿ ಕ್ಲಬ್ ಅಧ್ಯಕ್ಷರಾದ ರೊ|ದಯಾನಂದ ಎಚ್.ಓ ಕಾರ್ಯಕ್ರಮವನ್ನುದ್ದೇಶಿಸಿ ಮಾತಾಡಿದರು. ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಯಾದ ಶ್ರೀ ಪೃಥ್ವಿಜಿತ್ ಕಾರ್ಯಕ್ರಮಕ್ಕೆ ಶುಭಹಾರೈಸುದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ತರೀಕೆರೆ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ತಾಲ್ಲೂಕು ಆಡಳಿತ ವೈಧ್ಯಾಧಿಕಾರಿಗಳಾದ ಡಾ. ದೇವರಾಜ್ ಟಿ.ಎಂ. ಮಾತನಾಡಿ, ದಿವ್ಯಾಂಗರು ಸಂಘಗಳನ್ನು ಕಟ್ಟಿ ಸೇವಾಭಾರತಿಯಂತಹ ಸಂಸ್ಥೆಗಳೊಂದಿಗೆ ಕೈ ಜೋಡಿಸಿ ಇತರರಿಗೆ ಜಾಗೃತಿ ಕಾರ್ಯಕ್ರಮ ಹಾಗೂ ಬೆನ್ನುಹುರಿ ಅಪಘಾತದ ವಿಷಯಗಳ ಬಗ್ಗೆ ಅರಿವು ಮೂಡಿಸುವಂತಹ ಕಾರ್ಯಗಳನ್ನು ಮಾಡಬೇಕೆಂದು ಪ್ರೇರಣಾತ್ಮಕ ಮಾತುಗಳನ್ನು ಹೇಳಿದರು. ತರೀಕೆರೆ ರೋಟರಿ ಕ್ಲಬ್ ನ ಕಾರ್ಯದರ್ಶಿ ರೊ| ಶಶಿ ಕುಮಾರ್ ಪಿ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡದ ಹಿರಿಯ ಕ್ಷೇತ್ರ ಸಂಯೋಜಕರು ಶ್ರೀ ಮನು ಆರ್, ಉಡುಪಿ ಕ್ಷೇತ್ರ ಸಂಯೋಜಕರಾದ ಶ್ರೀ ಶಶಾಂತ್, ಸೇವಾ ಸಂಯೋಜಕರಾದ ಶ್ರೀ ಪಾಯಪ್ಪ ಜೈನ್ ಉಪಸ್ಥಿರಿದ್ದರು.
ಒಟ್ಟು 7 ಮಂದಿ ಫಲಾನುಭವಿಗಳು ಶಿಬಿರದಲ್ಲಿ ಪಾಲ್ಗೊಂಡಿದ್ದರು.ಕಾರ್ಯಕ್ರಮವನ್ನು ಸೇವಾಭಾರತಿ ಡಾಕ್ಯುಮೆಂಟೇಷನ್ ಸಂಯೋಜಕಿ ಅಪೂರ್ವ ಪಿ. ವಿ ನಿರೂಪಿಸಿದರು. ಐ.ಸಿ. ಟಿ. ಸಿ. ಪ್ರ. ಶಾ. ತಂತ್ರಜ್ಞರಾದ ಶ್ರೀ ಓಂಕಾರ್ ಮೂರ್ತಿ ಸ್ವಾಗತಿಸಿ, ಧನ್ಯವಾದವಿತ್ತರು.
