ಮಾನ್ಯ ಆರೋಗ್ಯ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ಇವರಿಗೆ ರಾಜ್ಯದಲ್ಲಿರುವ ಬೆನ್ನುಹುರಿ ಅಪಘಾತಗೊಂಡ ದಿವ್ಯಾಂಗರಿಗಾಗಿ ಆದೇಶಿಸಿದ ಆದೇಶವನ್ನು ಜಾರಿಗೊಳಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಪತ್ರ ನೀಡುವುದರ ಮೂಲಕ ಕೇಳಿ ಕೊಳ್ಳಲಾಯಿತು. ಇದಕ್ಕೆ ಮಾನ್ಯ ಆರೋಗ್ಯ ಸಚಿವರಾದ ಗುಂಡೂರಾವ್ ಇವರು ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಅಗತ್ಯವಿರುವ ಸೌಲಭ್ಯಗಳನ್ನು ಆರೋಗ್ಯ ಇಲಾಖೆಯಿಂದ ಅಧಿಕಾರಿಗಳ ಮೂಲಕ ಮಾಡಲಾಗುವುದು ಎಂದು ಭರವಸೆಯ ಮಾತುಗಳನ್ನಾಡಿದರು. ವೇದಿಕೆಯಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಕೆ ಅಶೋಕ್ ಕುಮಾರ್ ರೈ, ಕರ್ನಾಟಕ ಸರಕಾರದ ಮಾನ್ಯ ವಿಧಾನ ಪರಿಷತ್ ಸದಸ್ಯರಾದ ಶ್ರೀ ಕೆ ಹರೀಶ್ ಕುಮಾರ್ ಉಪಸ್ಥಿತರಿದ್ದರು.
