ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಮತ್ತು ಮಕ್ಕಳ ರಕ್ಷಣಾ ನೀತಿ ಬಗ್ಗೆ ಜಾಗೃತಿ ಕಾರ್ಯಾಗಾರ

15.11.23 03:01 PM By sewabharathikanyadi

ಸೌತಡ್ಕ: ಸೇವಾಭಾರತಿ- ಸೇವಾಧಾಮದ ವತಿಯಿಂದ ಸಂಸ್ಥೆಯ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಮತ್ತು ಮಕ್ಕಳ ರಕ್ಷಣಾ ನೀತಿ ಬಗ್ಗೆ ಜಾಗೃತಿ ಕಾರ್ಯಾಗಾರವನ್ನು ಜುಲೈ 08 ರಂದು ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ನಡೆಸಲಾಯಿತು.

ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಸಮಿತಿಯ ಅಧ್ಯಕ್ಷೆ ಶ್ರೀಮತಿ ವಸಂತಿ ಗೌಡ ಲೈಂಗಿಕ ಕಿರುಕುಳ ತಡೆಗಟ್ಟುವಿಕೆಯ ಬಗ್ಗೆ ಮಾಹಿತಿಯನ್ನು ನೀಡಿದರು.ಸೇವಾಭಾರತಿ ಡಾಕ್ಯುಮೆಂಟ್ಸ್ ಸಂಯೋಜಕಿ ಕು.ಅಪೂರ್ವ ಪಿ.ವಿ. ಮಕ್ಕಳ ರಕ್ಷಣಾ ನೀತಿ ಬಗ್ಗೆ ಮಾಹಿತಿ ಇತ್ತರು. ಒಟ್ಟು 11 ಮಂದಿ ಸಿಬ್ಬಂದಿಗಳು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.

sewabharathikanyadi