ಉಜಿರೆ (ಸೆ.05): ಸೇವಾಭಾರತಿ ಕನ್ಯಾಡಿ ಆಶ್ರಯದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಎಸ್. ಡಿ. ಯಂ ಕಾಲೇಜು ಇದರ ಸಹಯೋಗದೊಂದಿಗೆ ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆ ಹಾಗೂ ಗಾಲಿ ಕುರ್ಚಿ ರಾಲಿ ಕಾರ್ಯಕ್ರಮವು ಸೆಪ್ಟೆಂಬರ್ 05 ರಂದು ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆಯಿತು.
ಗಾಲಿಕುರ್ಚಿ ರಾಲಿಯು ಸಿದ್ದವನ ಎಸ್. ಡಿ. ಯಂ ಕಾಲೇಜಿನಿಂದ ಪ್ರಾರಂಭವಾಗಿ ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಶ್ರೀ ಕೃಷ್ಣಾನುಗ್ರಹ ಸಭಾಭವನದ ವರೆಗೆ ನಡೆಯಿತು.ಗಾಲಿ ಕುರ್ಚಿ ರಾಲಿಗೆ ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರರು ಶ್ರೀ ಶರತ್ ಕೃಷ್ಣ ಪಡ್ವೆಟ್ನಾಯ ಚಾಲನೆ ನೀಡಿದರುಗಾಲಿಕುರ್ಚಿ ರಾಲಿಯು ಯಶಸ್ವಿಯಾದ ನಂತರ ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆದ ಸಭಾಕಾರ್ಯಕ್ರಮದಲ್ಲಿ ಸೇವಾಭಾರತಿ ಖಜಾಂಚಿ ಶ್ರೀ ಕೆ. ವಿನಾಯಕ ರಾವ್ ಪ್ರಸ್ತಾವಿಕ ನುಡಿಗಳನ್ನಾಡಿದರು.ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಅಧ್ಯಕ್ಷರು ಶ್ರೀ ಪಿ. ಕುಶಾಲಪ್ಪ ಗೌಡ ಉದ್ಘಾಟಿಸಿ, ಶ್ರೀ ಕೆ.ವಿನಾಯಕ ರಾವ್ ಅವರ ಆತ್ಮ ವಿಶ್ವಾಸ ನಮಗೆಲ್ಲರಿಗೂ ಸ್ಪೂರ್ತಿ ದಾಯಕ. ದಿವ್ಯಾಂಗರು ಸಮಾಜದಲ್ಲಿ ಹೇಗೆ ಬದುಕಬೇಕು ಎಂದು ಹೇಳಿಕೊಟ್ಟಿದ್ದಾರೆ ಎಂದು ಹೇಳುತ್ತಾ ಉದ್ಘಾಟಕರ ನುಡಿಗಳನ್ನಾಡಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದಂತಹ ಎಸ್. ಡಿ.ಯಂ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಡಾ. ಬಿ. ಎ ಕುಮಾರ್ ಹೆಗ್ಡೆ ಮಾನವೀಯತೆಯ ನೆಲೆಯಲ್ಲಿ ಬಹಳ ಮುಖ್ಯವಾದ ಕಾರ್ಯಕ್ರಮವಿದು. ತಮ್ಮ ಜೀವನವನ್ನೇ ಸಮಾಜ ಸೇವೆಗೆ ಮೂಡಿಪಾಗಿಟ್ಟಿರುವ ವಿನಾಯಕ ರಾವ್ ಆತ್ಮ ವಿಶ್ವಾಸದ ಜ್ಯೋತಿಯಂತೆ ಬೆಳಗುತ್ತಿದ್ದಾರೆ ಎಂದು ಹೇಳಿದರು.ಬೆಳ್ತಂಗಡಿ ರೋಟರಿ ಕ್ಲಬ್ ನ ಕಾರ್ಯದರ್ಶಿ ರೊ. ವಿದ್ಯಾ ಕುಮಾರ್ ಕಾಂಚೋಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಸೇವಾಧಾಮದ ಸಂಚಾಲಕರಾದ ಶ್ರೀ ಕೆ ಪುರಂದರ ರಾವ್ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗ ಶ್ರೀ ನಾರಾಯಣ ಕೊಲ್ಲಿ ಇವರಿಗೆ ಗಾಲಿ ಕುರ್ಚಿ ಹಸ್ತಾಂತರಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಎಸ್. ಡಿ. ಯಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಯೋಜನಾಧಿಕಾರಿಗಳಾದ ಶ್ರೀ ಮಹೇಶ್ಕುಮಾರ್ ಶೆಟ್ಟಿ ಎಚ್. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದಂತಹ ಸೇವಾಭಾರತಿಯ ಅಧ್ಯಕ್ಷೆ ಶ್ರೀಮತಿ ಸ್ವರ್ಣಗೌರಿ ಅಧ್ಯಕ್ಷೀಯ ನುಡಿಗಳನ್ನಾಡಿದರು. ವೇದಿಕೆಯಲ್ಲಿ ಎಸ್. ಡಿ. ಯಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಯೋಜನಾಧಿಕಾರಿಗಳಾದ ಶ್ರೀಮತಿ ದೀಪ ಆರ್. ಪಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸೇವಾಭಾರತಿ ಕಾರ್ಯದರ್ಶಿ ಶ್ರೀ ಬಾಲಕೃಷ್ಣ, ಸೇವಾಭಾರತಿ ಸಿಬ್ಬಂದಿ ವರ್ಗ, ಉಜಿರೆ ಎಸ್. ಡಿ. ಯಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸ್ವಯಂ ಸೇವಕರು ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ದಿವ್ಯಾಂಗರಿಗೆ ಸೆಲ್ಫ್ ಕೇರ್ ಕಿಟ್ ಮತ್ತು ಮೆಡಿಕಲ್ ಕಿಟ್ ಅನ್ನು ವಿತರಿಸಲಾಯಿತು.
ಒಟ್ಟು 200 ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮವನ್ನು ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸ್ವಯಂ ಸೇವಕಿ ಕು. ಸಿಂಚನಾ ನಿರೂಪಿಸಿದರು. ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸ್ವಯಂ ಸೇವಕ ಶ್ರೀ ಸುಧೇಶ್ ಸ್ವಾಗತಿಸಿ, ಸೇವಾಧಾಮದ ಅಸಿಸ್ಟೆಂಟ್ ತೆರಪಿಸ್ಟ್ ಶ್ರೀಮತಿ ಪುಷ್ಪಲತಾ ವಂದಿಸಿದರು.